ಮೈಸೂರು ವಿವಿ 100ನೇ ಘಟಿಕೋತ್ಸವ ; ಕನ್ನಡದಲ್ಲಿ ವಿವಿ ಶ್ಲಾಘಿಸಿದ ಮೋದಿ!!

ಮೈಸೂರು :

     ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಕೀರ್ತಿ ಗಳಿಸಿರುವ ಮೈಸೂರು ವಿವಿಗೆ ಇಂದು 100ನೇ ವರ್ಷದ ಘಟಿಕೋತ್ಸವ ಸಂಭ್ರಮ. ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತನಾಡಿದರು.

    ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಗಳ ಕುಲಾಧಿಪತಿಗಳು, ರಾಜ್ಯಪಾಲ ವಜೂಭಾಯಿ ವಾಲ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

     ಕನ್ನಡದಲ್ಲಿ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರು, ಮೈಸೂರು ವಿವಿ ಕುರಿತು ಮಾತನಾಡಿದರು. “ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಒಬ್ಬ ವಿದ್ಯಾರ್ಥಿನಿಯ ಬದಲು ಹತ್ತು ವಿದ್ಯಾರ್ಥಿನಿಯರಿದ್ದರೆ ಖುಷಿಯಾಗುತ್ತಿತ್ತು ಎಂದಿದ್ದರು. ಈಗ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರೇ ಹೆಚ್ಚು ಪದವಿ ಪಡೆದಿದ್ದಾರೆ” ಜಾಗತಿಕ ಸ್ಪರ್ಧಾ ಜಗತ್ತಿನಲ್ಲಿ ಯುವಜನತೆ ಸಶಕ್ತರಾಗಬೇಕು. ಈ ನಿಟ್ಟಿನಲ್ಲಿ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ. ಈ ನೀತಿಯನ್ನು ಅಳವಡಿಸಲು ಮೈಸೂರು ವಿಶ್ವವಿದ್ಯಾಲಯ ಆಸಕ್ತಿ ತೋರಿಸಿರುವುದು ಸಂತಸದ ವಿಚಾರ. ಹೊಸ ಸಂಸ್ಥೆಗಳನ್ನು ಆರಂಭಿಸುವುದು ಮಾತ್ರ ಮುಖ್ಯ ಅಲ್ಲ, ಶಿಕ್ಷಣದ ಗುಣಮಟ್ಟ ಅಭಿವೃದ್ಧಿಗೂ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

    ಭಾರತದಲ್ಲಿ 2014ರಲ್ಲಿ 16 ಐಐಟಿ ಶಿಕ್ಷಣ ಸಂಸ್ಥೆಗಳಿದ್ದವು, ಈಗ ಪ್ರತಿ ವರ್ಷ ಒಂದೊಂದು ನಿರ್ಮಾಣ ಮಾಡಲಾಗುತ್ತಿದೆ. ಹೊಸದಾಗಿ ಐಐಎಂ ಶಿಕ್ಷಣ ಸಂಸ್ಥೆಗಳ ನಿರ್ಮಾಣವಾಗಿದೆ. ಪದವಿ ಪಡೆಯುವ ಜೊತೆಗೆ ದೇಶ ನಿರ್ಮಾಣದ ಹೊಣೆ ಕೂಡ ನಿಮ್ಮ ಮೇಲಿದೆ ಎಂದು ಕಿವಿ ಮಾತು ಹೇಳಿದರು. ಇಂದು ನಿಮಗೆ ಬಹಳ ದೊಡ್ಡ ದಿನವಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಅಪಾರ ವಾಗಿದೆ ಎಂದು ವಿವಿಯನ್ನು ಶ್ಲಾಘಿಸಿದರು.

    ಇದೇ ಸಂದರ್ಭ ಕವಿ ಕುವೆಂಪು ಅವರನ್ನೂ ಸ್ಮರಿಸಿದ ಅವರು, ಕುವೆಂಪು ಅವರು ಮಾನಸ ಗಂಗೋತ್ರಿ ಎಂದು ಹೆಸರಿಟ್ಟಿದ್ದಾರೆ, ದೇಶದ ಅತ್ಯುತ್ತಮ ಸಂಶೋಧನೆ ಕಡೆಗೆ ಸಂಸ್ಥೆ ಮತ್ತಷ್ಟು ಗಮನಹರಿಸಬೇಕಿದೆ, ಉನ್ನತ ಮಟ್ಟಕ್ಕೆ ವಿಶ್ವವಿದ್ಯಾಲಯವನ್ನು ಕೊಂಡೊಯ್ಯಬೇಕಿದೆ ಎಂದರು.

      ಇನ್ನು ಘಟಿಕೋತ್ಸವ ಉದ್ದೇಶಿಸಿ ಭಾಷಣ ಮಾಡುವ ಬಗ್ಗೆ ಸ್ವತಃ ನರೇಂದ್ರ ಮೋದಿಯವರೇ ಟ್ವೀಟ್​ ಮಾಡಿ ಖಚಿತ ಪಡಿಸಿದ್ದರು.   

     ಮೈಸೂರು ವಿಶ್ವವಿದ್ಯಾಲಯವು 1916ರ ಜುಲೈ 27 ರಂದು ಸ್ಥಾಪನೆಯಾಗಿದ್ದು, ಕರ್ನಾಟಕ, ದಕ್ಷಿಣ ಭಾರತದ ಪ್ರಥಮ ಹಾಗೂ ದೇಶದ 6ನೇ ವಿಶ್ವವಿದ್ಯಾಲಯವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap