ಶ್ರೀಗಳು ಗುಣಮುಖರಾಗಲು ಪ್ರಧಾನಿಯ ಪ್ರಾರ್ಥನೆ!

ದೆಹಲಿ:

      ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಶ್ರೀಗಳು ಶೀಘ್ರ ಚೇತರಿಸಿಕೊಳ್ಳಲು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ.

      ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟ್ಟರಿನಲ್ಲಿ, “ಪರಮ ಪೂಜ್ಯ ಡಾಕ್ಟರ್ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರದ್ದು ಅಮೋಘ ವ್ಯಕ್ತಿತ್ವ. ಅವರ ಮಹೋನ್ನತ ಸೇವೆ ಕೋಟ್ಯಂತರ ಜನರ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರಿದೆ. ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಹಾಗೂ ದೇವರು ಅವರಿಗೆ ಉತ್ತಮ ಆರೋಗ್ಯ ಕರುಣಿಸಲೆಂದು ಇಡೀ ರಾಷ್ಟ್ರ ಪ್ರಾರ್ಥಿಸುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ.

      ಶ್ರೀಗಳಿಗೆ ಮಠದಲ್ಲೇ ಸಿದ್ಧವಾಗಿರುವ ಐಸಿಯು ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಮೆರಿಕದಿಂದ ಬಂದಿರುವ ಸ್ವಾಮೀಜಿ ಶಿಷ್ಯರಾಗಿರುವ ಡಾ. ನಾಗಣ್ಣ ವಿಶೇಷ ವೈದ್ಯರ ತಂಡದೊಂದಿಗೆ ಸೇರಿಕೊಂಡು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ