ವಿಷ ಪ್ರಸಾದ : ಮೃತರ ಕುಟುಂಬಕ್ಕೆ ಕೆಪಿಸಿಸಿಯಿಂದ 1 ಲಕ್ಷ ರೂ. ಪರಿಹಾರ

ಮೈಸೂರು:

      ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚಗತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತರಾದ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್‌ ವತಿಯಿಂದ ತಲಾ ಒಂದು ಲಕ್ಷ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

     ಪ್ರಸಾದ ಸೇವಿಸಿ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಗ್ರಾಮಸ್ಥರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದರು. ಈ ವೇಳೆ ಘಟನೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಸ್ಥರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು. 

      ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ವೈಯಕ್ತಿಕ ಕಾರಣಗಳಿಂದ ಇಂತಹ ಕೃತ್ಯ ನಡೆದಿದ್ದರೆ ಶಿಕ್ಷೆ ಆಗಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗುವುದು. ಮೃತ ಕುಟುಂಬದವರಿಗೆ 1 ಲಕ್ಷ ರೂ. ನೀಡಲಾಗುವುದು. ಈಗಾಗಲೇ ಸರ್ಕಾರ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಇದಕ್ಕೆ ಕೆಪಿಸಿಸಿ ವತಿಯಿಂದ ನೀಡುವ ಅಲ್ಪ ಪ್ರಮಾಣದ ಸಹಾಯ ಕುಟುಂಬಸ್ಥರಿಗೆ ಬೆನ್ನೆಲುಬು ಆಗಲಿದೆ ಎಂದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ