ವಿಜಯಪುರ:
ಕಾಂಗ್ರೆಸ್ ಮುಖಂಡೆ, ಜೆಡಿಎಸ್‍ನ ವಿಜಯಪುರ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ಹತ್ಯಾ ಪ್ರಕರಣದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ತೌಫಿಕ್ ಶೇಕ್ ಅಲಿಯಾಸ್ ಪೈಲ್ವಾನ್ ಬಂಧಿತ ಆರೋಪಿ. ಈತ ಮಹಾರಾಷ್ಟ್ರದ ಎಐಎಂಐಎಂ ಮುಖಂಡ ಹಾಗೂ ಸೊಲ್ಲಾಪುರ ಮಹಾನಗರ ಪಾಲಿಕೆ ಕಾರ್ಪೊರೇಟರ್.
ತೌಫಿಕ್ ಶೇಖ್ ಜತೆ ರೇಷ್ಮಾ ಅನೈತಿಕ ಸಂಬಂಧ ಹೊಂದಿದ್ದರು. ಈ ವಿಚಾರವನ್ನು ಮುಂದಿಟ್ಟುಕೊಂಡು ರೇಷ್ಮಾ ಹಣ ಮತ್ತು ಆಸ್ತಿಗಾಗಿ ತೌಫಿಕ್ನನ್ನು ಪದೇಪದೆ ಬ್ಲಾಕ್ಮೇಲ್ ಮಾಡುತ್ತಿದ್ದರು. ತೌಫಿಕ್ನ ಎಂಟು ಎಕರೆ ಆಸ್ತಿಯನ್ನು ತನ್ನ ಹೆಸರಿಗೆ ಬರೆಯುವಂತೆ ಅವರು ಪೀಡಿಸುತ್ತಿದ್ದರು. ರೇಷ್ಮಾಳ ಬ್ಲಾಕ್ಮೇಲ್ನಿಂದ ಬೇಸತ್ತ ತೌಫಿಕ್ ಶೇಖ್ ಆಕೆಯನ್ನು ಹತ್ಯೆ ಮಾಡಿದ್ದಾನೆ ಎಂದು ವಿಜಯಪುರ ಎಸ್ಪಿ ಪ್ರಕಾಶ್ ನಿಕಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಸವನಬಾಗೇವಾಡಿ ಸಿಪಿಐ ಮಹದೇವ ಶಿರಹಟ್ಟಿ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೌಫಿಕ್ ಆತನ ಕಾರು ಚಾಲಕ ಇಜಾಜ್ ಬಿರಾದಾರನನ್ನು ಬಂಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ