ಹಣಕ್ಕಾಗಿ ಪೊಲೀಸ್ ಪೇದೆ ಮೇಲೆ ಬ್ಲೇಡ್ ನಿಂದ ಹಲ್ಲೆ!!

ಶಿವಮೊಗ್ಗ :

      ಗಾಂಜಾ ಮತ್ತಿನಲ್ಲಿದ್ದ ಯುವಕರಿಬ್ಬರು ಹಣಕ್ಕಾಗಿ ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಬ್ಲೇಡ್ ನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ನಡೆದಿದೆ. 

      ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಮಂಜುನಾಥ್ ಎಂಬುವವರು ಹಲ್ಲೆಗೊಳಗಾದ ಪೊಲೀಸ್ ಪೇದೆಯಾಗಿದ್ದು, ಇವರು ಕುಂಸಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಂಗಳವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದಲ್ಲಿದ್ದಾಗ ಇಬ್ಬರು ಯುವಕರು ಮಂಜುನಾಥ್ ಬಳಿ ಬಂದು ಹಣ ಕೇಳಿದ್ದಾರೆ. ಹಣ ನೀಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಯುವಕರು ಕುತ್ತಿಗೆ, ಕೈ- ಕಾಲಿಗೆ ಬ್ಲೇಡ್ ನಿಂದ ಕೊಯ್ದು ಅಲ್ಲಿಂದ ಪರಾರಿಯಾಗಿದ್ದಾರೆ. ದಾಳಿಯಲ್ಲಿ ಪೇದೆ ಮಂಜುನಾಥ್​ ಅವರ ಬಲಗೈ ಮತ್ತು ಕುತ್ತಿಗೆಯ ಚರ್ಮ ಹರಿದಿದ್ದು ತೀವ್ರ ಸ್ವರೂಪದ ಗಾಯಗಳಾಗಿವೆ.

      ಅಲ್ಲಿದ್ದವರು ತಕ್ಷಣ ಗಾಯಗೊಂಡ ಮಂಜುನಾಥ್ ಅವರನ್ನು ಮೆಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ಪ್ರತ್ಯಕ್ಷದರ್ಶಿಗಳ ಮಾಹಿತಿಯ ಮೇರೆಗೆ ಆಟೋ ಚಾಲಕ ನದೀಂ ಹಾಗೂ ನಜೀರ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link