ಚಿಕ್ಕಮಗಳೂರು:
ಕರ್ತವ್ಯನಿರತ ಪೊಲೀಸ್ ಪೇದೆಯೋರ್ವರು ಮೃತಪಟ್ಟ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಯೊಗೀಶ್ (31) ಎಂದು ಗುರುತಿಸಲಾಗಿದ್ದು, ಠಾಣೆಯ ವಿಶ್ರಾಂತಿ ಕೋಣೆಯಲ್ಲಿ ರಾತ್ರಿ 3 ಗಂಟೆ ಹೊತ್ತಿನಲ್ಲಿ ಕುಸಿದುಬಿದ್ದು ಒದ್ದಾಡುತ್ತಿದ್ದ ಯೋಗೀಶ್ ಅವರನ್ನು ಸಹೋದ್ಯೋಗಿಗಳು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮಾತ್ರೆ ಅಥವಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಎಸ್ಪಿ ಹರೀಶ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
