ಬೈಕ್​​ಗೆ ಕ್ಯಾಂಟರ್​​ ಡಿಕ್ಕಿ : ಪೊಲೀಸ್ ಪೇದೆ ಸಾವು!!

ಬೆಂಗಳೂರು :

      ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಪೊಲೀಸ್ ಪೇದೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಂದಿನಿ ಲೇಔಟ್ ನಲ್ಲಿ ನಡೆದಿದೆ.

      ನಂದಿನಿ ಲೇಔಟ್ ಠಾಣೆಯ ಹೆಡ್ ಕಾನ್ಸ್​​ಟೇಬಲ್ ಭಕ್ತರಾಮ್ ದಾಸ್ ಮೃತ ದುರ್ದೈವಿ. ಸೋಮವಾರ ರಾತ್ರಿ ಭಕ್ತರಾಮ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಈ ವೇಳೆ ಲಾರಿಯೊಂದು ವೇಗವಾಗಿ ಬಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಲ್ಲಿದ್ದ ಕಲ್ಲೊಂದು ಸಿಡಿದಿದ್ದು, ಇದರಿಂದ ಹಿಂದಿನಿಂದ ಬರುತ್ತಿದ್ದ ಭಕ್ತರಾಮ್ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. 

      ಡಿಕ್ಕಿಯ ರಭಸಕ್ಕೆ ಡಿವೈಡರ್ ಬಳಿಯಿಂದ ದೊಡ್ಡ ಗಾತ್ರದ ಕಲ್ಲುಗಳು ಸಿಡಿದಿವೆ. ಪರಿಣಾಮ ಭಕ್ತರಾಮ್ ಹಿಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಡಿವೈಡರ್‌ಗೆ ಗುದ್ದಿದ್ದಾರೆ. 

      ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಭಕ್ತರಾಮ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

      ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಯಶವಂತಪುರ ಸಂಚಾರಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap