ರಾಮನಗರ :
ಸಾರ್ವಜನಿಕರಿಂದ ಕಾನೂನು ಬಾಹಿರವಾಗಿ ಹಣ ತೆಗೆದುಕೊಂಡಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಅನ್ನು ಅಮಾನತುಗೊಳಿಸಲಾಗಿದೆ.
ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಅಫ್ಜಲ್ ಖಾನ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಆನ್ಲೈನ್ ಮೂಲಕ ದೂರುದಾರರಿಂದ 3,000 ರೂಪಾಯಿ ಲಂಚ ಸ್ವೀಕರಿಸಿದ್ದರು ಎಂಬ ದೂರು ಕೇಳಿಬಂದಿತ್ತು.
ಇದಾದ ನಂತರ ಪದೇ ಪದೇ ಲಂಚ ಸ್ವೀಕಾರದ ಬಗ್ಗೆ ಪೇದೆ ಅಫ್ಜಲ್ ಖಾನ್ ಮೇಲೆ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ.ಶೆಟ್ಟಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ