ವಿಶ್ವಾಸಮತಯಾಚನೆ : ವಿಧಾನಸೌಧ ಸುತ್ತ ಪೊಲೀಸ್ ಸರ್ಪಗಾವಲು!

ಬೆಂಗಳೂರು: 

     ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ವಿಶ್ವಾಸ ಮತಯಾಚನೆ ಮಾಡುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ವಿಧಾನಸೌಧದ ಬಂದೋಬಸ್ತ್​ಗಾಗಿ ಸಾವಿರ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್​ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.

     ಎಲ್ಲಾ ದ್ವಾರಗಳಲ್ಲಿ ‌ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ನೇತೃತ್ವದಲ್ಲಿ ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ, 5 ಡಿಸಿಪಿಗಳು, 20 ಎಸಿಪಿಗಳು, 25 ಕೆಎಸ್ಆರ್​ಪಿ ತುಕಡಿ, 21 ಸಿಎಆರ್ ತುಕಡಿ, ಕ್ಷಿಪ್ರ ಕಾರ್ಯಚರಣೆ ಪಡೆ ಮತ್ತು ವಾಟರ್ ಜೆಟ್, ಹೊಯ್ಸಳ, ಪೊಲೀಸರನ್ನ ನಿಯೋಜನೆ ಮಾಡಲಾಗಿದ್ದು, ಸಿಸಿಟಿವಿ ವ್ಯವಸ್ಥೆ ಕೂಡ ಮಾಡಲಾಗಿದೆ.

     ಇನ್ನು ವಿಧಾನಸೌಧದ ಸುತ್ತಮುತ್ತ ಪೊಲೀಸ್ ಸರ್ಪಗಾವಾಲು ಹಾಕಲಾಗಿದ್ದು, ವಿಧಾನಸೌಧ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ 144ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿರುವ ಕಮೀಷನರ್, ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಸಂಭ್ರಮಾಚರಣೆ, ಘೋಷಣೆ ಕೂಗುವುದು, ಪ್ರತಿಭಟನೆ, ಧರಣಿ, ಸತ್ಯಾಗ್ರಹ ನಡೆಸುವುದಕ್ಕೆ ನಿಷೇಧ ಮಾಡಲಾಗಿದೆ ಎಂದು ಅಲೋಕ್‌ ಕುಮಾರ್ ತಿಳಿಸಿದ್ದಾರೆ.

 

Recent Articles

spot_img

Related Stories

Share via
Copy link
Powered by Social Snap