ಬೆಂಗಳೂರು :
ಗುರುವಾರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಈ ಮೂಲಕ 3 ದಿನಗಳ ಕಾಲ ಸರ್ಕಾರಕ್ಕೆ ಕೊಂಚ ರಿಲೀಫ್ ಸಿಕ್ಕಿದೆ.
ಇಂದು ಸ್ಪೀಕರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಸಲಹಾ ಸಮಿತಿ ಸಭೆ ನಡೆಯಿತು. ಈ ವೇಳೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸಮತಯಾಚನೆ ಮಾಡುವಂತೆ ಬಿಜೆಪಿ ಪಟ್ಟು ಹಿಡಿದಿದ್ದರು. ಸರ್ಕಾರ ಮತ್ತು ಆಡಳಿತ ಪಕ್ಷದ ನಾಯಕರ ಜೊತೆ ಸ್ಪೀಕರ್ ಸುಮಾರು ಮುಕ್ಕಾಲು ಗಂಟೆ ಸಭೆ ನಡೆಸಿದರು. ನಂತರ ಸ್ಪೀಕರ್ ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವಾಸ ಮತ ಸಾಬೀತು ಪಡಿಸಲು ಸಿಎಂಗೆ ಅನುಮತಿ ನೀಡಿದರು.
ಸಭೆಯಲ್ಲಿ ಬಿಎಸ್‍ವೈ, ಸುಪ್ರೀಂ ತೀರ್ಪು ಯಾವಾಗ ಬೇಕಾದರೂ ಬರಲಿ. ಆದರೆ ಸಿಎಂ ಇಂದೇ ವಿಶ್ವಾಸ ಮತ ಯಾಚನೆ ಮಾಡಬೇಕು. ಯಾಕೆಂದರೆ ಸರ್ಕಾರಕ್ಕೆ ಬಹುಮತ ಇಲ್ಲ. ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಪಟ್ಟು ಹಿಡಿದರು.
ದೋಸ್ತಿ ಸರ್ಕಾರದ ಹಾಗೂ ಬಿಜೆಪಿಯ ವಾದ-ಪ್ರತಿವಾದ ಆಲಿಸಿದ ಸ್ಪೀಕರ್ ರಮೇಶ್ ಕುಮಾರ್, ನಾಳೆ ಸುಪ್ರೀಂ ಕೋರ್ಟ್ ನಲ್ಲಿ ರಾಜೀನಾಮೆ ನೀಡಿರುವ ಶಾಸಕರ ಕುರಿತಾದ ತೀರ್ಪು ಪ್ರಕಟಗೊಳ್ಳಲಿದೆ. ಅಲ್ಲಿಯವರೆಗೂ ತಾಳ್ಮೆಯಿಂದ ಕಾಯಿರಿ. ತೀರ್ಪಿನ ಬಳಿಕ ದಿನಾಂಕ ನಿಗದಿ ಮಾಡೋಣ ಎಂದು ಸಲಹೆ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ದೋಸ್ತಿ ಸರ್ಕಾರ ಬಹುಮತ ಸಾಭೀತು ಪಡಿಸುವ ದಿನಾಂಕವನ್ನು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ನಿಗಧಿ ಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮೂಲಕ ದೋಸ್ತಿ ಸರ್ಕಾರಕ್ಕೆ ಬಿಗ್ ರಿಲೀಫ್ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ