ಹೆಚ್ಚಳವಾಯ್ತು ವಿದ್ಯುತ್ ದರ : ರಾಜ್ಯದ ಜನತೆಗೆ ಕರೆಂಟ್ ಶಾಕ್!!

ಬೆಂಗಳೂರು :

      2019-20ನೇ ಸಾಲಿನ ವಿದ್ಯುತ್ ದರ ಪ್ರರಿಷ್ಕರಣೆ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಲೋಕಸಭಾ ಚುನಾವಣೆ ಬಳಿಕ ಗ್ರಾಹಕರಿಗೆ ವಿದ್ಯುತ್‌ ದರ ಹೆಚ್ಚಳದ ಬರೆ ಬಿದ್ದಿದೆ. ಪ್ರತಿ ಯೂನಿಟ್‌ ಗೆ 33 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

      ಬೆಸ್ಕಾಂ ಪ್ರತಿ ಯೂನಿಟ್​ಗೆ 1.01 ರೂ. ಏರಿಕೆ ಮಾಡುವಂತೆ ಕೆಇಆರ್​ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೆಇಆರ್​ಸಿ ಯೂನಿಟ್​ಗೆ 33 ಪೈಸೆ ಏರಿಕೆ ಮಾಡಲು ಒಪ್ಪಿಗೆ ನೀಡಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದು ಯೂನಿಟ್ ವಿದ್ಯುತ್​ಗೆ 1.38, ಸೆಸ್ಕಾಂ ಯೂನಿಟ್ ಗೆ ಸರಾಸರಿ 1 ರೂ., ಹೆಸ್ಕಾಂ 1.63 ರೂ. ಗೆ,  ಹಾಗೂ ಜೆಸ್ಕಾಂ 1.27 ಪೈಸೆ ಏರಿಕೆ ಮಾಡುವಂತೆ ಕೆಇಆರ್​ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

      ಕರ್ನಾಟಕ ವಿದ್ಯುತ್‌ ನಿಯಂತ್ರಣಾ ಆಯೋಗ ಈ ಕುರಿತ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿದೆ. ಎಲ್ಲ ಐದು ವಲಯಗಳ ವಿದ್ಯುತ್‌ ದರ ಜೂನ್ 1 ರಿಂದ ಜಾರಿಗೆ ಬರುವಂತೆ ನೂತನ ದರ ಪೂರ್ವಾನ್ವಯವಾಗಲಿದೆ.

      ಲೋಕಸಭಾ ಚುನಾವಣೆ ಬಳಿಕ ಪೆಟ್ರೋಲ್-ಡಿಸೇಲ್‌ ದರ ನಿರಂತರವಾಗಿ ಏರಿಕೆಯಾಗುತ್ತಿದ್ದು, ಈಗ ವಿದ್ಯುತ್‌ ದರವೂ ಪ್ರತಿ ಯೂನಿಟ್‌ ಗೆ 33 ಪೈಸೆ ಏರಿಕೆಯಾಗಿರುವುದು ಸಾರ್ವಜನಿಕರಿಗೆ ಹೊರೆಯಾಗಿ ಪರಿಣಮಿಸಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap