ಬೆಂಗಳೂರು :
2019-20ನೇ ಸಾಲಿನ ವಿದ್ಯುತ್ ದರ ಪ್ರರಿಷ್ಕರಣೆ ಪ್ರಕಟವಾಗಿದ್ದು, ನಿರೀಕ್ಷೆಯಂತೆ ಲೋಕಸಭಾ ಚುನಾವಣೆ ಬಳಿಕ ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳದ ಬರೆ ಬಿದ್ದಿದೆ. ಪ್ರತಿ ಯೂನಿಟ್ ಗೆ 33 ಪೈಸೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಬೆಸ್ಕಾಂ ಪ್ರತಿ ಯೂನಿಟ್ಗೆ 1.01 ರೂ. ಏರಿಕೆ ಮಾಡುವಂತೆ ಕೆಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಕೆಇಆರ್ಸಿ ಯೂನಿಟ್ಗೆ 33 ಪೈಸೆ ಏರಿಕೆ ಮಾಡಲು ಒಪ್ಪಿಗೆ ನೀಡಿದೆ. ಮೆಸ್ಕಾಂ ವ್ಯಾಪ್ತಿಯಲ್ಲಿ ಒಂದು ಯೂನಿಟ್ ವಿದ್ಯುತ್ಗೆ 1.38, ಸೆಸ್ಕಾಂ ಯೂನಿಟ್ ಗೆ ಸರಾಸರಿ 1 ರೂ., ಹೆಸ್ಕಾಂ 1.63 ರೂ. ಗೆ, ಹಾಗೂ ಜೆಸ್ಕಾಂ 1.27 ಪೈಸೆ ಏರಿಕೆ ಮಾಡುವಂತೆ ಕೆಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಕರ್ನಾಟಕ ವಿದ್ಯುತ್ ನಿಯಂತ್ರಣಾ ಆಯೋಗ ಈ ಕುರಿತ ಪ್ರಸ್ತಾವನೆಗೆ ಸಮ್ಮತಿ ಸೂಚಿಸಿದೆ. ಎಲ್ಲ ಐದು ವಲಯಗಳ ವಿದ್ಯುತ್ ದರ ಜೂನ್ 1 ರಿಂದ ಜಾರಿಗೆ ಬರುವಂತೆ ನೂತನ ದರ ಪೂರ್ವಾನ್ವಯವಾಗಲಿದೆ.
ಲೋಕಸಭಾ ಚುನಾವಣೆ ಬಳಿಕ ಪೆಟ್ರೋಲ್-ಡಿಸೇಲ್ ದರ ನಿರಂತರವಾಗಿ ಏರಿಕೆಯಾಗುತ್ತಿದ್ದು, ಈಗ ವಿದ್ಯುತ್ ದರವೂ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆಯಾಗಿರುವುದು ಸಾರ್ವಜನಿಕರಿಗೆ ಹೊರೆಯಾಗಿ ಪರಿಣಮಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ