ಹಾಸನ:

ಲೋಕಸಭಾ ಚುನಾವಣೆಯ ಮತಎಣಿಕೆ ಮುಂದುವರಿದಿದ್ದು, ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದಾರೆ.
ಗುರುವಾರ 2019ರ ಲೋಕಸಭಾ ಚುನಾವಣೆ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ – ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ರವರು 5,64,852 ಮತಗಳನ್ನು ಪಡೆದು, ಬಿಜೆಪಿ ಅಭ್ಯರ್ಥಿ ಎಂ.ಮಂಜುರವರು 4,43,055 ಮತಗಳನ್ನು ಪಡೆಯುವ ಮೂಲಕ 1,21,797 ಮತಗಳ ಅಂತರದಿಂದ ಪ್ರಜ್ವಲ್ ರೇವಣ್ಣ ಗೆಲುವಿನ ನಗೆ ಬೀರಿದ್ದಾರೆ.
ಫಲಿತಾಂಶ ಹೊರಬಿದ್ದಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








