ಬೆಂಗಳೂರು:
ಖ್ಯಾತ ನಟ ಪ್ರಕಾಶ್ ರೈ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆಯಲಾಗಿದೆ.
ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ.
ಪ್ರತಾಪ್ ಸಿಂಹ ಟ್ವಿಟ್ಟರ್ ನಲ್ಲಿ ಪ್ರಕಾಶ ರೈ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದರು. ಇಂದು ಕೋರ್ಟ್ ಗೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿಂದೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸಂಸದರಿಗೆ ಅನೇಕ ಬಾರಿ ಸಮನ್ಸ್ ನೀಡಲಾಗಿತ್ತು. ಆದರೂ ಪ್ರತಾಪ್ ಸಿಂಹ ಹಲವು ಬಾರಿ ಕೋರ್ಟ್ ಗೆ ಹಾಜರಾಗದೇ ಇದ್ದರು. ಹೀಗಾಗಿ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.
ಈ ಹಿನ್ನಲೆಯಲ್ಲಿ ಇಂದು ಪ್ರತಾಪ್ ಸಿಂಹ ವಿಚಾರಣೆಗೆ ಹಾಜರಾದ ವೇಳೆ ನ್ಯಾಯಾಧೀಶರು ಕಸ್ಟಡಿಗೆ ಪಡೆಯುವಂತೆ ಸೂಚಿಸಿದರಲ್ಲದೆ ಅವರನ್ನು ನ್ಯಾಯಾಲಯದ ಹಾಲ್ ನಲ್ಲಿ ಕುಳಿತುಕೊಳ್ಳುವಂತೆ ತಿಳಿಸಲಾಗಿದೆ. ವಿಚಾರಣೆ ಬಳಿಕ ಜಾಮೀನು ನೀಡುವ ನಿರೀಕ್ಷೆ ಇದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
