ಹಾಸನ : KSRTC ಬಸ್ಸಿನಲ್ಲೇ ಹೆಣ್ಣು ಮಗುವಿನ ಜನನ!!

ಹಾಸನ :

     ಗರ್ಭಿಣಿ ಮಹಿಳೆಯೊಬ್ಬರು ಕೆಎಸ್ಆರ್‌ಟಿಸಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ.

     ಷಹೀನಾ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ. ಹುಬ್ಬಳ್ಳಿ ಮೂಲದ ಈಕೆಯನ್ನು ಮಡಿಕೇರಿಯ ಹುಡುಗನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಮಂಗಳವಾರ ಪೋಷಕರ ಜೊತೆ ಬಸ್ಸಿನಲ್ಲಿ ಬರುತ್ತಿದ್ದಾಗ ಹಾಸನದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕ ಸ್ವಲ್ಪ ಸಮಯ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಬಸ್ ನಿಲ್ಲಿಸಿದ್ದಾರೆ. ಸ್ವಲ್ಪ ಸಮಯದ ನಂತರ ಷಹೀನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

     ನಂತರ ಅಂಬುಲೆನ್ಸ್ ಗೆ ಕರೆ ಮಾಡಿ ಮಗು ಮತ್ತು ತಾಯಿಯನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಸದ್ಯ ತಾಯಿ ಮಗು ಆರೋಗವಾಗಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap