ವೇಶ್ಯಾವಾಟಿಕೆ : ಮೊದಲ ಬಾರಿಗೆ ಕೆಪಿಐಟಿ ಕಾಯ್ದೆ ಅಡಿ ಬಂಧನ!!

ಬೆಂಗಳೂರು:

      ನಗರದಲ್ಲಿ ವೇಶ್ಯಾವಾಟಿಕೆ ನಡೆಸಲು‌ ಯುವತಿಯರನ್ನು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು‌ ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ (Karnataka prevention of illegal trafficking act) ಕಾಯ್ದೆ ಅಡಿ ಬಂಧಿಸಿದ್ದಾರೆ.

ಸ್ವಾತಿ ಬಂಧಿತ ಆರೋಪಿ :

     ನಗರದಲ್ಲಿ ಸ್ವಾತಿ, ವಿವಿಧೆಡೆ ಮಸಾಜ್‌ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹೀಗಾಗಿ ಹಲವು ಬಾರಿ ಸ್ವಾತಿಯನ್ನು ಪೊಲೀಸರು ಬಂಧಿಸಿದ್ದರು. ಆದರೆ, ಈಕೆ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ಮತ್ತೆ ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು. ಅಲ್ಲದೆ, ವೇಶ್ಯಾವಾಟಿಕೆಗಾಗಿ ಯುವತಿಯರನ್ನ ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದರು‌ ಎಂಬ ಆರೋಪವು ಕೇಳಿ ಬಂದಿದೆ.

     ಸದ್ಯ ಸ್ವಾತಿಯನ್ನು ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆ ಅಡಿ ಬಂಧಿಸಲಾಗಿದ್ದು, ಆರೋಪಿಗೆ ಒಂದು ವರ್ಷ ಜಾಮೀನು ಲಭ್ಯವಾಗುವುದಿಲ್ಲ ಎನ್ನಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link