ಮಂಗಳೂರು:
ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಸೋಮಬಾಯಿ ಮೋದಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮಂಗಳೂರಿಗೆ ಆಗಮಿಸಿದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸೋಮಬಾಯಿ ಮೋದಿ, ದೇವಸ್ಥಾನ ಭೇಟಿ ನೀಡುವ ಸಲುವಾಗಿ ಮಂಗಳೂರಿಗೆ ಆಗಮಿಸಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯನ್ನು ಜನ ಮೆಚ್ಚಿಕೊಂಡಿದ್ದಾರೆ. ಅದರಂತೆ ನಾನು ಕೂಡ ಮೋದಿಯನ್ನು ಮೆಚ್ಚಿಕೊಂಡಿದ್ದೇನೆ. ಧರ್ಮಸ್ಥಳಕ್ಕೆ ಹಾಗೂ ಇತರ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಸಲುವಾಗಿ ಮಾತ್ರ ಜಿಲ್ಲೆಗೆ ಆಗಮಿಸಿದ್ದೇನೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸೋಮ ಬಾಯಿ ಮೋದಿ ಅವರನ್ನು ದ.ಕ.ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಬಿಜೆಪಿ ಯುವ ಮುಖಂಡ ಮಹೇಶ್ ತುಪ್ಪೆಕಲ್ಲು ಮೊದಲಾದವರು ಸ್ವಾಗತಿಸಿದರು.
ಸೋಮ ಬಾಯಿ ಮೋದಿ ಅವರು ಮಧ್ಯಾನ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು ಗಾಣಿಗ ಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಕಲ್ಲಡ್ಕ ಶ್ರೀರಾಮ ಶಾಲೆಗೆ ಭೇಟಿ ನೀಡುವರು. ನಂತರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡುವರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
