ತುಮಕೂರು : ಸಿದ್ದಗಂಗಾ ಮಠದಲ್ಲಿ ಕನ್ನಡದಲ್ಲಿಯೇ ಮೋದಿ ಮಾತು!!

ತುಮಕೂರು :

       ವಿವಿಧ ಕಾರ್ಯಕ್ರಮಗಳ ನಿಮಿತ್ತ ತುಮಕೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಕನ್ನಡದಲ್ಲಿಯೇ ತಮ್ಮ ಮಾತನ್ನು ಆರಂಭಿಸಿ, ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳು ಸೇರಿದಂತೆ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಮಾತುಗಳ ಮೂಲಕ ಗಮನ ಸೆಳೆದರು.

        ಮೊದಲಿಗೆ ಲಿಂಗೈಕ್ಯ ಸಿದ್ದಗಂಗಾ ಶಿವಕುಮಾರಸ್ವಾಮೀಜಿಯವರ ಗದ್ದುಗೆಗೆ ನಮನ ಸಲ್ಲಿಸಿದ ಅವರು, ಅಲ್ಲಿಂದ ಮಠದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಿದ್ದಲಿಂಗ ಸ್ವಾಮೀಜಿಗಳಿಂದ ಸನ್ಮಾನಕ್ಕೆ ಒಳಗಾದರು.

       ಈ ಬಳಿಕ ಮಠದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನಗೆ ತುಮಕೂರಿಗೆ ಬರಲು ಸಂತೋಷವಾಗುತ್ತದೆ. ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಷಯಗಳು ಎಂಬುದಾಗಿ ಕನ್ನಡದಲ್ಲಿಯೇ ಮಾತು ಆರಂಭಿಸಿದರು. ಸಿದ್ದಗಂಗಾ ಶ್ರೀಗಳಿಲ್ಲದ ಸಂದರ್ಭದಲ್ಲಿ ನಾನು ಆಗಮಿಸಿದ್ದಕ್ಕೆ ವಿಷಾದಿಸುತ್ತೇನೆ ಎಂದ ಅವರು, ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನು ಆಡಿದರು.

      ಇನ್ನೂ ಮುಂದುವರೆದು ಮಾತನಾಡಿದ ಅವರು, ಪೌರತ್ವ ವಿರೋಧಿಗಳಿಗೆ ಖಡಕ್ ಸಂದೇಶ ಸಾರಿದ ಮೋದಿ, ಯಾವುದೇ ಧರ್ಮದವರಿಗೆ ಪೌರತ್ವ ತಿದ್ದುಪಡಿ ಮಸೂದೆಯಿಂದ ತೊಂದರೆಯಾಗದು. ಬಡ ವರ್ಗದವರಿಗಾಗಿ ವಿವಿಧ ಜನಪರ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಮೂಲಕ ದೇಶದ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap