ಕೋಲಾರ:
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆಹಾರ ಪದಾರ್ಥಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಾಂಶುಪಾಲರು ಗ್ರಾಮಸ್ಥರಿಗೆ ಸಿಕ್ಕಿಬಿದ್ದಿರುವ ಘಟನೆ ಮಾಲೂರಿನಲ್ಲಿ ನಡೆದಿದೆ.
ಮಾಲೂರು ತಾಲೂಕಿನ ರಾಜೇನಹಳ್ಳಿ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆಯ ಪ್ರಾಂಶುಪಾಲ ಮಂಜುನಾಥ್ ಆರೋಪಿ. ಅಕ್ರಮವಾಗಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ಇನ್ನಿಬ್ಬರು ಆರೋಪಿಗಳೊಂದಿಗೆ ಸೇರಿ ವಸತಿ ಶಾಲೆಯ ಆಹಾರ ಪದಾರ್ಥಗಳನ್ನು ಟೆಂಪೊವೊಂದರಲ್ಲಿ ಸಾಗಿಸುತ್ತಿದ್ದ ಸಂದರ್ಭ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ಹೇಳಲಾಗಿದೆ.
ಪ್ರಾಂಶುಪಾಲರು ಸೇರಿ ಮೂವರನ್ನು ಗ್ರಾಮಸ್ಥರು ಹಿಡಿದು ಕೂಡಿ ಹಾಕಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿಗಳನ್ನು ಮಾಸ್ತಿ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
