ತುಮಕೂರು:
ಇಂದು ಬೆಳ್ಳಂಬೆಳಗ್ಗೆ ಖಾಸಗಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬಸ್ಸಿನಲ್ಲಿದ್ದ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ತುಮಕೂರಿನ ಕುಣಿಗಲ್ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬೈಪಾಸ್ ಬಳಿ ಇಂದು ಬೆಳಗ್ಗೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸುಗಮ ಟ್ರಾವೆಲ್ ಬಸ್ ಅಪಘಾತಕ್ಕೀಡಾಗಿದೆ. ಎದುರಿನಿಂದ ಬಂದ ಲಾರಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಶಂಕರ್ ಎಂಬವರ ಎರಡೂ ಕಾಲುಗಳು ತುಂಡಾಗಿದೆ.
ಬೆಳಗ್ಗಿನ ಜಾವ ಸಂಭವಿಸಿದ ಈ ಅಪಘಾತದಿಂದ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 26 ಮಂದಿ ಗಾಯಗೊಂಡಿದ್ದಾರೆ. ಅಲ್ಲದೇ ಮೂವರ ಸ್ಥಿತಿ ಗಂಭೀರವಾಗಿದೆ.
ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಹಾಗೂ ಚಾಲಕನನ್ನು ಹೆದ್ದಾರಿಯಲ್ಲಿ ತೆರಳುತ್ತಿದ್ದ ಜನರು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ