ಚಿಕ್ಕಬಳ್ಳಾಪುರ :
ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟದ ಮೇಲೆ ಖಾಸಗಿ ವಾಹನಗಳನ್ನು ನಿಷೇಧಿಸಲು ತೋಟಗಾರಿಕಾ ಇಲಾಖೆ ಮುಂದಾಗಿದೆ.
ವಾರಂತ್ಯದಲ್ಲಿ ಸಾವಿರಾರು ಜನರು ಸೂರ್ಯೋದಯ ವೀಕ್ಷಣೆ ಮಾಡಲು ನಂದಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಖಾಸಗಿ ವಾಹನಗಳು ಬೆಟ್ಟದ ಮೇಲೆ ಹೋಗುವುದರಿಂದ ಸಂಚಾರ ದಟ್ಟಣೆ, ಪಾರ್ಕಿಂಗ್ ಸಮಸ್ಯೆ, ವಾಯು ಮಾಲಿನ್ಯ ಉಂಟಾಗುತ್ತಿದೆ. ಆದ್ದರಿಂದ, ತೋಟಗಾರಿಕಾ ಇಲಾಖೆ ವಾಹನ ಸಂಚಾರ ಬಂದ್ ಮಾಡಲು ತೀರ್ಮಾನಿಸಿದೆ. ಪ್ರವಾಸಿಗರು ಬೆಟ್ಟದ ಕೆಳಗೆ ತಮ್ಮ ವಾಹನವನ್ನು ಪಾರ್ಕ್ ಮಾಡಬೇಕಾಗುತ್ತದೆ. ಅಲ್ಲಿಂದ ಬೆಟ್ಟದ ಮೇಲೆ ತೆರಳಲು ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಯನ್ನು ಮಾಡಲಾಗುತ್ತದೆ.
ಅರಣ್ಯ ಇಲಾಖೆ ಹಿವಮದ್ ಗೋಪಾಲಸ್ವಾಮಿ ಬೆಟ್ಟದ ಮೇಲೆ ಖಾಸಗಿ ವಾಹನ ನಿಷೇಧಿಸಿದ್ದು, ಇದೇ ಮಾದರಿಯಲ್ಲಿ ನಂದಿ ಬೆಟ್ಟದ ಮೇಲೆ ವಾಹನ ಸಂಚಾರ ನಿಷೇಧಿಸಲು ಬೆಟ್ಟದ ನಿರ್ವಹಣೆಯ ಹೊಣೆ ಹೊತ್ತಿರುವ ತೋಟಗಾರಿಕಾ ಇಲಾಖೆ ಚಿಂತನೆ ನಡೆಸಿದೆ.
ಜಿಲ್ಲಾಧಿಕಾರಿಗಳಿಗೆ ಪಾರ್ಕಿಂಗ್‌ಗೆ ಸೂಕ್ತ ಪ್ರದೇಶವನ್ನು ಗುರುತಿಸುವಂತೆಯೂ ಸೂಚನೆ ನೀಡಲಾಗಿದ್ದು, ಪಾರ್ಕಿಂಗ್ ಸ್ಥಳ ನಿರ್ಮಾಣವಾದ ಬಳಿಕ ಬೆಟ್ಟದ ಮೇಲೆ ವಾರಂತ್ಯದಲ್ಲಿ ಖಾಸಗಿ ವಾಹನ ನಿಷೇಧಿಸಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
