ಬೆಂಗಳೂರು :
ಸಚಿವ ಡಿ.ಕೆ.ಶಿವಕುಮಾರ್ ಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದ್ದು, ಬೇನಾಮಿ ಆಸ್ತಿ ಸುಳಿಯಲ್ಲಿ ಸಿಲುಕಿರುವ ಡಿಕೆಶಿಗೆ ನೋಟಿಸ್ ಮೇಲೆ ನೋಟಿಸ್ ನೀಡುತ್ತಿರುವ ಇಡಿ ಜೊತೆಗೆ ಐಟಿ ಅಟ್ಯಾಚ್ ಮೆಂಟ್ ನೋಡಿಸ್ ನೀಡಿದೆ.
ಬೇನಾಮಿ ಆಸ್ತಿ ಬಗ್ಗೆ ತನಿಖೆ ನಡೆಸುತ್ತಿರುವ ಐಟಿ 15 ದಿನಗಳ ಒಳಗಡೆ ಉತ್ತರ ನೀಡುವಂತೆ ಡಿಕೆಶಿಗೆ ಸೂಚಿಸಿದೆ. ಒಂದು ವೇಳೆ ಈ ನೋಟಿಸ್ ಗೆ ಸರಿಯಾದ ಉತ್ತರ ನೀಡದೇ ಇದ್ದಲ್ಲಿ ಡಿ.ಕೆ.ಶಿವಕುಮಾರ್ ಆಸ್ತಿ ಜಪ್ತಿಯಾಗುವ ಸಾದ್ಯತೆ ಇದೆ ಎನ್ನಲಾಗುತ್ತಿದೆ.
ಸಚಿವ ಡಿ.ಕೆ.ಶಿವಕುಮಾರ್ ಅವರು ಐಟಿ ವಿಚಾರಣೆಯ ಸಂದರ್ಭದಲ್ಲಿ ಅಧಿಕಾರಿಗಳ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿತ್ತು. ಈಗಾಗಲೇ ಐಟಿ ಎರಡು ಬಾರಿ ನೋಟಿಸ್ ನೀಡಿದ್ದು, ಈಗ ಉತ್ತರ ನೀಡದೇ ಇದ್ದರೆ ಡಿಕೆಶಿಗೆ ಸಂಕಷ್ಟವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ