ಬೆಂಗಳೂರು:
ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಅವಧಿಯಲ್ಲಿ ಇನ್ಮುಂದೆ ಮೊಬೈಲ್ ಫೋನ್ ಮತ್ತು ಲ್ಯಾಪ್ ಟಾಪ್ ಬಳಸುವ ಹಾಗಿಲ್ಲ ಎಂದು ಪಿಯುಸಿ ಬೋರ್ಡ್ ಮಹತ್ವದ ಆದೇಶವನ್ನು ಹೊರಡಿಸಿತ್ತು,ಪಿಯು ಬೋರ್ಡ್ ತನ್ನ ಆದೇಶದಲ್ಲಿ ತಿದ್ದುಪಡಿ ಮಾಡಿ ಮರು ಆದೇಶ ಹೊರಡಿಸಿದೆ.
ಪದವಿಪೂರ್ವ ಶಿಕ್ಷಣ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾಲೇಜಿನ ಸಮಯದಲ್ಲಿ ಮೊಬೈಲ್, ಲ್ಯಾಪ್‌ಟಾಪ್ ಇಟ್ಟುಕೊಳ್ಳುವುದನ್ನು ಶೈಕ್ಷಣಿಕ ಹಿತದೃಷ್ಟಿಯಿಂದ ಸಂಪೂರ್ಣವಾಗಿ ನಿಷೇಧಿಸುವ ಆದೇಶವನ್ನು ಹೊರಡಿಸಿತ್ತು.
ಆದರೆ, ವಾಣಿಜ್ಯ ಶಾಸ್ತ್ರ, ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಅವಶ್ಯಕವಾಗಿದೆ. ಆದರೆ, ಅವರಿಗೂ ಲ್ಯಾಪ್‌ಟಾಪ್ ನಿಷೇಧ ಮಾಡಲಾಗಿದೆ. ಹೀಗಾಗಿ, ಆದೇಶದ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು.
ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮೊಬೈಲ್ ಮತ್ತು ಲ್ಯಾಪ್‌ಟಾಪ್ ನಿಷೇಧ ಕುರಿತಂತೆ ಆದೇಶ ಜಾರಿಗೆ ತರುವಂತೆ ಎಲ್ಲ ಉಪ ನಿರ್ದೇಶಕರಿಗೆ ಪಿಯು ಬೋರ್ಡ್ ಸುತ್ತೋಲೆ ಹೊರಡಿಸಲಾಗಿತ್ತು. ಇದರಲ್ಲಿ ಕೆಲ ದೋಷಗಳಿತ್ತು. ಇದನ್ನು ಸರಿಪಡಿಸಿ, ಹೊಸ ಆದೇಶ ನೀಡಲಾಗಿದೆ ಎಂದು ಪಿಯು ಬೋರ್ಡ್ ಮುಖ್ಯಸ್ಥೆ ಸಿ ಶಿಖಾ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ