ಬೆಂಗಳೂರು :
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಈಗಾಗಲೇ ನಿಗದಿಪಡಿಸಿದಂತೆ ಮಾರ್ಚ್ 4 ರಿಂದ 23 ರವರೆಗೆ ನಡೆಯಲಿದ್ದು, ಇಂದಿನಿಂದ ಆನ್ ಲೈನ್ ನಲ್ಲಿ ಪ್ರವೇಶಪತ್ರ ಲಭ್ಯವಾಗಲಿದೆ.
ಈ ಕುರಿತು ಮಾಹಿತಿ ನೀಡಿರುವ ಪಿಯು ಇಲಾಖೆಯ ನಿರ್ದೇಶಕಿ ಎಂ.ಕನಗವಲ್ಲಿ, ಇದೇ ಫೆಬ್ರವರಿ 25 ರಿಂದ ಫೆ.10 ರವರೆಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿ ಅಂಕ ಪಟ್ಟಿ ಹಾಗೂ ಉತ್ತರ ಪತ್ರಿಕೆಗಳನ್ನು ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಕೂಡಲೇ ರವಾನಿಸಲಾಗುವುದು. ಪ್ರಾಯೋಗಿಕವಾಗಿ ಪರೀಕ್ಷೆಯ ಅಂಕಗಳನ್ನು ನೇರವಾಗಿ ಆನ್ ಲೈನ್ ಮೂಲಕ ಕೇಂದ್ರಕ್ಕೆ ರವಾನಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
