ಬೆಂಗಳೂರು:

ಬೇಸಿಗೆ ರಜೆ ಕಡಿತ ರದ್ದು ಮಾಡುವುದೂ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 21 ರಂದು ಪಿಯು ಉಪನ್ಯಾಸಕರು ಮೌಲ್ಯ ಮಾಪನ ಬಹಿಷ್ಕರಿಸಿ, ಅನಿರ್ಧಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದರು.
ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಪರಿಷತ್ ಸದಸ್ಯ ಶ್ರೀಕಂಠೇಗೌಡ, ಬಸವರಾಜ್ ಹೊರಟ್ಟಿ, ಬೋಜೆಗೌಡ ಸೇರಿದಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಸಿಎಂ, ಮೇ 6ರ ಬದಲಿಗೆ ಮೇ 20ರಿಂದ ತರಗತಿಗಳನ್ನು ಆರಂಭಿಸಲು ಒಪ್ಪಿಗೆ ನೀಡಿದ್ದು, ಅಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.
ಹೀಗಾಗಿ ಉಪನ್ಯಾಸಕರು ಧರಣಿ ಮತ್ತು ಮೌಲ್ಯಮಾಪನ ಬಹಿಷ್ಕಾರ ಕೈಬಿಡುವಂತೆ ಎಂದು ಕೆ.ಟಿ.ಶ್ರೀಕಂಠೇಗೌಡ ಮನವಿ ಮಾಡಿದ್ದಾರೆ.
ಇನ್ನು ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಲಿಖಿತ ಆದೇಶ ಹೊರ ಬಿದ್ದ ಬಳಿಕವೇ ತೀರ್ಮಾನ ಕೈಗೊಳ್ಳುವುದಾಗಿ ಸರ್ಕಾರಿ ಪದವಿ ಪೂರ್ವ ಉಪನ್ಯಾಸಕ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








