ಬೆಂಗಳೂರು :
ದ್ವಿತೀಯ ಪಿಯುಸಿ ಮತ್ತು ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಇನ್ಮುಂದೆ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ.
ಹೌದು, ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಅತಿ ಹೆಚ್ಚು ಅಂಕ ಪಡೆದ ಟಾಪರ್ಸ್ ಗಳ ಉತ್ತರ ಪತ್ರಿಕೆಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲು ನಿರ್ಧರಿಸಿದೆ.
ಶಿಕ್ಷಣ ಇಲಾಖೆಯಿಂದ ನಡೆಸುವ "ಸಂವೇದನಾ" ಫೋನ್-ಇನ್ ಕಾರ್ಯಕ್ರಮದಲ್ಲಿ ಬಂದ ಮನವಿಗಳ ಆಧಾರದ ಮೇಲೆ
ಕಳೆದ ವರ್ಷದ ಪಿಯುಸಿ ಮತ್ತು ಎಸ್‌ಎಸ್‌ಎಲ್ ಸಿ ಪರೀಕ್ಷೆಗಳಲ್ಲಿ
ಅತಿ ಹೆಚ್ಚು ಅಂಕಪಡೆದಿರುವ ವಿದ್ಯಾರ್ಥಿಗಳ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳನ್ನು ವೆಬ್ ಸೈಟ್ ಮೂಲಕ ಪ್ರಕಟಿಸಲು ನಿರ್ಧರಿಸಲಾಗಿದೆ.
— S.Suresh Kumar, Minister – Govt of Karnataka (@nimmasuresh) December 26, 2019
ಪ್ರತಿ ವರ್ಷ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಟಾಪರ್ ಆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಅಪ್ ಲೋಡ್ ಮಾಡಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪಿಯುಸಿ ಬೋರ್ಡ್ ಮತ್ತು ಎಸ್‍ಎಸ್‍ಎಲ್‍ಸಿ ಬೋರ್ಡ್ ಗೆ ನಿರ್ದೇಶನ ನೀಡಿದ್ದಾರೆ. ಪ್ರಸಕ್ತ ವರ್ಷದಿಂದಲೇ ಈ ವ್ಯವಸ್ಥೆ ಜಾರಿಗೆ ಬರಲಿದ್ದು, ಕಳೆದ ವರ್ಷ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ಶೀಘ್ರವೇ ಇಲಾಖೆ ವೆಬ್‍ಸೈಟ್ ನಲ್ಲಿ ಲಭ್ಯವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ