ಚಿಕ್ಕಬಳ್ಳಾಪುರ :

ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್ ಸಿ ಹಾಗೂ ಜುಲೈ ಅಂತ್ಯದ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಜಿಲ್ಲೆಯಲ್ಲಿ ಸೋಮವಾರ ವಿವಿಧ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಪದ್ಧತಿ ಅನುಷ್ಟಾನಕ್ಕೆ ತರಲಾಗುವುದು. ಅದಕ್ಕೂ ಮೊದಲು ರಾಜ್ಯದ ಹಿನ್ನಲೆ ಗಮನದಲ್ಲಿ ಇಟ್ಟುಕೊಂಡು ಜೊತೆಗೆ ತಜ್ಞರ ಅಭಿಪ್ರಾಯ ಪಡೆದ ನಂತರ ಯಾವ ರೀತಿಯಲ್ಲಿ ಆನ್ ಲೈನ್ ಶಿಕ್ಷಣ ಜಾರಿಗೆ ತರಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದರು.
ಎಲ್‌ಕೆಜಿ ಹಾಗೂ ಯುಕೆಜಿಗೆ ಆನ್ ಲೈನ್ ಶಿಕ್ಷಣ ಜಾರಿಮಾಡುವುದಿಲ್ಲ. ಆದರೆ, ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಯಾವ ತಂತ್ರಜ್ಞಾನ ಬಳಸಿ ಬೋಧನೆ ಮಾಡಬಹುದು ಎಂಬುದರ ಬಗ್ಗೆ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








