ಬೆಂಗಳೂರು :
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಹಾವಳಿ ವಿಪರೀತವಾಗಿ ಹೆಚ್ಚುತ್ತಿರುವ ಕಾರಣದಿಂದ ನಿಗದಿಯಂತೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದೂಡಿಕೆಯಾಗಿದೆ.
ಇದೇ ತಿಂಗಳ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ, ಕೊರೊನಾ ಹಾವಳಿಯಿಂದ ಮುಂದೂಡಲಾಗಿದೆ. ಈ ಕುರಿತು ಅಧಕೃತವಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಅಲ್ಲದೆ ಪ್ರಥಮ ಪಿಯು ಪರೀಕ್ಷೆಗಳನ್ನು ಕೂಡ ರದ್ದು ಮಾಡಲಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರನ್ನೂ ಮುಂದಿನ ತರಗತಿಗಳಿಗೆ ನೇರವಾಗಿ ತೇರ್ಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾತನಾಡಿದ ಅವರು, ಪಿಯುಸಿ ಪರೀಕ್ಷೆ ಪ್ರಾರಂಭಿಸುವ 20 ದಿನಗಳೊಳಗಿ ದಿನಾಂಕ ಪ್ರಕಟಿಸುತ್ತೇವೆ. ವಿದ್ಯಾರ್ಥಿಗಳು ಯಾವ ಕಾರಣಕ್ಕೂ ವಿಚಲಿತರಾಗದೆ ಅಭ್ಯಾಸ ಮುಂದುವರಿಸಬೇಕು ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
