ಪಿಯುಸಿ ಉಪನ್ಯಾಸಕರ‌ ನೇಮಕಾತಿ ಪ್ರಕ್ರಿಯೆಗೆ ಡೇಟ್ ಫಿಕ್ಸ್!!

ಬೆಂಗಳೂರು :

     ಪಿಯುಸಿ ಉಪನ್ಯಾಸಕರ‌ ನೇಮಕಾತಿ ಕೌನ್ಸೆಲಿಂಗ್ ನ್ನು‌ ನಡೆಸಲು ಶಿಕ್ಷಣ ಸಚಿವ ಸುರೇಶ್‌ಕುಮಾರ್ ಸೂಚನೆ‌ ನೀಡಿದ್ದಾರೆ.

      ಈಗಾಗಲೇ ಪಿಯು ಉಪನ್ಯಾಸಕರ ಹುದ್ದೆಯ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಪರೀಕ್ಷೆಯ ಫಲಿತಾಂಶ ಕೂಡ ಪ್ರಕಟಿಸಲಾಗಿತ್ತು.  ನೇಮಕಾತಿಗೆ ಕೌನ್ಸಿಲಿಂಗ್ ಮಾತ್ರವೇ ಬಾಕಿ ಉಳಿದಿತ್ತು. ಇದೀಗ ಪಿಯು ಉಪನ್ಯಾಸಕರ ಹುದ್ದೆಗಳಿಗೆ ಜುಲೈ7 ರಂದು ಕೌನ್ಸಿಲಿಂಗ್ ನಡೆಸಿ, ನೇಮಕಾತಿ ಮಾಡಿಕೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಆದೇಶಿಸಿದ್ದಾರೆ.

      ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರಗಳೊಂದಿಗೆ ನಡೆಸಲು ಸೂಚಿಸಲಾಗಿದ್ದು, ಕೋವಿಡ್ ಸುರಕ್ಷಾ ಕ್ರಮಗಳನ್ನು ಪಾಲಿಸಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಆದೇಶ ನೀಡಿದ್ದು, ಹೆಚ್ಚಿನ ಪ್ರಕ್ರಿಯೆಗಳನ್ನು ಆನ್ ಲೈನ್ ಮೂಲಕ ಕೌನ್ಸೆಲಿಂಗ್ ನಡೆಸಲೂ ಸಹ ಸಚಿವರು ನಿರ್ದೇಶಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ