ಬಳ್ಳಾರಿ:
ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಂಕ್ಚರ್ ಶಾಪ್ ನಡೆಸಿ ಜೀವನ ಸಾಗಿಸುವ ವ್ಯಕ್ತಿಯ ಮಗಳು ಕಲಾ ವಿಭಾಗದಲ್ಲಿ(Arts) ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾಳೆ.
ಜಿಲ್ಲೆಯ ಕೊಟ್ಟೂರು ಪಟ್ಟಣದದಲ್ಲಿ ಪಂಕ್ಚರ್ ಶಾಪ್ ನಡೆಸುವ ದೇವೇಂದ್ರಪ್ಪ ಎಂಬುವವರ ಮಗಳು ಕುಸುಮ 594 ಅಂಕ ಗಳಿಸುವ ಮೂಲಕ ಕಲಾ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದು ಜಿಲ್ಲೆಗೆ ಹಾಗೂ ತನ್ನ ತಂದೆ-ತಾಯಿಗೆ ಕೀರ್ತಿ ತಂದಿದ್ದಾಳೆ.
ಕುಸುಮ ಕನ್ನಡ ಮತ್ತು ಸಂಸ್ಕೃತದಲ್ಲಿ 96 ಅಂಕ ಪಡೆದುಕೊಂಡಿದ್ದು, ಇನ್ನೂ ಐಚ್ಛಿಕ ಕನ್ನಡ, ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಮೂರು ವಿಷಯದಲ್ಲೂ 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕೊನೆಯದಾಗಿ ಶಿಕ್ಷಣದಲ್ಲಿ 99 ಅಂಕವನ್ನು ಪಡೆದುಕೊಂಡಿದ್ದಾಳೆ.
ಕುಸುಮ ಕೊಟ್ಟೂರು ಪಟ್ಟಣದ ಇಂದು ಪಿಯುಸಿ ಕಾಲೇಜು ವಿದ್ಯಾರ್ಥಿಯಾಗಿದ್ದು, ಕಳೆದ ನಾಲ್ಕು ವರ್ಷಗಳಿಂದ ಈ ಇಂದು ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳೇ ಕಲಾ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆಯುತ್ತಿರುವುದು ಮತ್ತೊಂದು ಖುಷಿ ಪಡುವಂತಹ ವಿಷಯವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ