‘ಚುನಾವಣೆಯಲ್ಲಿ ವ್ಯಕ್ತಿ ಮುಖ್ಯವಲ್ಲ ; ಸಿದ್ಧಾಂತ ಮುಖ್ಯ’

ಬೆಂಗಳೂರು:

      ಚುನಾವಣೆಯಲ್ಲಿ ವ್ಯಕ್ತಿ ಮುಖ್ಯವಲ್ಲ, ಸಿದ್ದಾಂತ ಮುಖ್ಯವಾಗಿದೆ. ನಾವು ಸಿದ್ಧಾಂತ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ’ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ 

      ಏಪ್ರಿಲ್ 18 ಮತ್ತು 23ರಂದು ಎರಡು ಹಂತದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಚುನಾವಣಾ ಸಿದ್ಧತೆಗಳ ಕುರಿತು ಮಾತುಕತೆ ನಡೆಸಿ ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಲು ಇಂದು ಬಿಜೆಪಿ ಮುಖಂಡ ಆರ್.ಅಶೋಕ್ ಅವರು ಸದಾಶಿವ ನಗರದಲ್ಲಿರುವ ಎಸ್‌.ಎಂ.ಕೃಷ್ಣ  ಅವರ ನಿವಾಸಕ್ಕೆ ಭೇಟಿ ನೀಡಿದ್ದರು.

      ಆರ್.ಅಶೋಕ್ ಭೇಟಿ ಬಳಿಕ ಮಾತನಾಡಿದ ಎಸ್.ಎಂ.ಕೃಷ್ಣ ಅವರು, ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಹಾಗಾಗಿ ನಾನು ರಾಜ್ಯಾದ್ಯಂತ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲು ಬಯಸಿದ್ದೇನೆ. ಬೆಂಗಳೂರಿನ ಮೂರೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಪ್ರಬಲವಾದ ನೆಲೆ ಇದೆ ಎಂದು ತಿಳಿಸಿದರು.

       ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಸ್ಪರ್ಧಿಸುವ ಕುರಿತು ಪ್ರತಿಕ್ರಿಯೆ ನೀಡಿದ ಎಸ್‌.ಎಂ.ಕೃಷ್ಣ ಅವರು, ‘ಇಲ್ಲಿ ವ್ಯಕ್ತಿ ಮುಖ್ಯವಲ್ಲಿ ಸಿದ್ದಾಂತ ಮುಖ್ಯವಾಗಿದೆ. ನಾವು ಸಿದ್ಧಾಂತ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ’ ‘ಬೆಂಗಳೂರು ನಗರದಲ್ಲಿ ಬಿಜೆಪಿಗೆ ಭದ್ರ ನೆಲೆ ಇದೆ. ನಾನು ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತೇನೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು’ ಎಂದು ಹೇಳಿದರು.

      ಮಂಡ್ಯ, ಮೈಸೂರು, ತುಮಕೂರು, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ಹಾಸನದಲ್ಲಿ ಒಕ್ಕಲಿಗರ ಪ್ರಭಾವ ಜಾಸ್ತಿ ಇದೆ. ಈ ಕಾರಣಕ್ಕಾಗಿ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗಿರುವ ಎಸ್‍ಎಂ ಕೃಷ್ಣ ಅವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರೆ ಲಾಭವಾಗಬಹುದು ಎನ್ನುವ ಲೆಕ್ಕಾಚಾರವನ್ನು ಬಿಜೆಪಿ ಹಾಕಿಕೊಂಡಿದೆ.

      ಹಳೆ ಮೈಸೂರು ಪ್ರಾಂತ್ಯದಲ್ಲಿರುವ ಜೆಡಿಎಸ್ ಕೋಟೆಯನ್ನು ಕೆಡವಲು ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣ ಅವರನ್ನು ಪ್ರಚಾರಕ್ಕೆ ಬಳಸಲು ಬಿಜೆಪಿ ಪ್ಲಾನ್ ಮಾಡಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap