ಹೊಸದಿಲ್ಲಿ:
‘ರಫೇಲ್ ದಾಖಲೆಗಳು ಕಳವಾಗಿವೆ’ ಎಂದು ಹೇಳುವ ಮೂಲಕ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಹೊಸ ಬಾಂಬ್ ಸಿಡಿಸಿದ್ದಾರೆ.
ರಕ್ಷಣಾ ಸಚಿವಾಲಯದಿಂದ ರಫೇಲ್ ಗೆ ಸಂಬಂಧಿಸಿದ ಕೆಲ ದಾಖಲೆಗಳು ಕಳವಾಗಿದೆ. ಮಾಜಿ ಅಥವಾ ಹಾಲಿ ಅಧಿಕಾರಿಗಳು ದಾಖಲೆಗಳನ್ನು ಕದ್ದಿರಬಹುದು. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ರಫೇಲ್ ಡೀಲ್ ದಾಖಲೆಗಳನ್ನು ಕಳುವು ಮಾಡಿದವರೇ ಅದರ ಮಾಹಿತಿ ಸೋರಿಕೆಯಾಗುವಂತೆ ಮಾಡಿದ್ದರು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೇಳಿದೆ.
ರಫೇಲ್ ಡೀಲ್ ಕುರಿತು ತಾನು ನೀಡಿದ್ದ ತೀರ್ಪಿನ ಮರುಪರಿಶೀಲನಾ ಅರ್ಜಿಯನ್ನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆರಂಭಿಸಿದೆ. ಫ್ರಾನ್ಸ್ ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಕೊಳ್ಳುವಾಗ ಕೇಂದ್ರ ಸರಕಾರದ ನಿರ್ಧಾರದಲ್ಲಿ ಯಾವುದೇ ಖಚಿತತೆ ಇರಲಿಲ್ಲ ಎಂದು ಆರೋಪಿಸಿ ಹೂಡಲಾಗಿದ್ದ ಸಾರ್ವಜನಿಕ ಹಿತರಕ್ಷಣಾ ಅರ್ಜಿ ಸೇರಿದಂತೆ ಎಲ್ಲ ಅರ್ಜಿಗಳನ್ನು ಸರ್ವೋಚ್ಚ ನ್ಯಾಯಾಲಯ ಡಿಸೆಂಬರ್ 14ರಂದು ವಜಾ ಮಾಡಿತ್ತು. ನಂತರ ಫೆಬ್ರವರಿ 21 ರಂದು ಮತ್ತೆ ರಫೇಲ್ ತೀರ್ಪಿನ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿತ್ತು. ಅದರ ವಿಚಾರಣೆ ಇಂದು ನಡೆಯುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ