CCB ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ!!

ಬೆಂಗಳೂರು :

i

     ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.

    ಡ್ರಗ್ಸ್​ ಮಾಫಿಯಾ ಸಂಬಂಧ ರಾಗಿಣಿ ಸ್ನೇಹಿತ ರವಿಶಂಕರ್​ನನ್ನು ನಿನ್ನೆ ಬಂಧಿಸಿದ್ದ ಪೊಲೀಸರು ಇಂದು ಬೆಳಗ್ಗೆಯೇ ಯಲಹಂಕದಲ್ಲಿರುವ ರಾಗಿಣಿ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

    ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ, ನಿನ್ನೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸಿ ರಾಗಿಣಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ