ತುಮಕೂರು :
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಹೆಚ್.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸೂಚಿಸಿದ್ದರು ಎಂದು ಮಾಜಿ ಶಾಸಕ ಟಿ.ಬಿ.ಜಯಚಂದ್ರ ಹೇಳಿದ್ದಾರೆ.
ಚಿಕ್ಕನಾಯಕನಹಳ್ಳಿಯಜಿಎಂಆರ್ ಕಲ್ಯಾಣ ಮಂಟಪದಲ್ಲಿ ನಡೆದ ಮೈತ್ರಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರು ಜೆಡಿಎಸ್ ನಿಂದ ಸ್ಪರ್ಧಿಸಿದರೂ ಅದು ರಾಹುಲ್ ಗಾಂಧಿ ಕೈ ಬಲಪಡಿಸಲು. ನಾವು ಹಾಕುವ ಒಂದೊಂದು ಮತವೂ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.
ಬಿಜೆಪಿಯವರು ಸಂವಿಧಾನ ಬದಲು ಮಾಡಲು ಬಂದಿದ್ದೇವೆ ಎನ್ನುತ್ತಾರೆ. ಆದರೆ, ಅದನ್ನು ವಿರೋಧಿಸಿ ಪ್ರಧಾನಿ ಮೋದಿ ಒಂದೂ ಮಾತನ್ನೂ ಆಡಿಲ್ಲ. ಅದರ ಹಿಂದೆ ಹಿಡನ್ ಅಜೆಂಡಾ ಇದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
