ಹೊಸದಿಲ್ಲಿ :
90ರ ಹರೆಯದ ಹಿರಿಯ ಕಾಂಗ್ರೆಸ್ ನಾಯಕ ಮೋತಿ ಲಾಲ್ ವೋರಾ ಅವರನ್ನು ಹಂಗಾಮಿ ಎಐಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
1928ರ ಡಿಸೆಂಬರ್ 20ರಂದು ಜನಿಸಿದ್ದ ವೋರಾ ಅವರು ಈ ಹಿಂದೆ ಎರಡು ಅವಧಿಯಲ್ಲಿ ಮಧ್ಯ ಪ್ರದೇಶ ಮುಖ್ಯಮಂತ್ರಿಗಳಾಗಿದ್ದರು.
ಇದಕ್ಕೆ ಮುನ್ನ ರಾಹುಲ್ ಗಾಂಧಿ ಅವರು, ‘ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದೇನೆ; ಅಂತೆಯೇ ನಾನೀಗ ಪಕ್ಷದ ಅಧ್ಯಕ್ಷನಲ್ಲ; ಆದುದರಿಂದ ಪಕ್ಷ ಬೇಗನೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು’ ಎಂದು ರಾಹುಲ್ ಗಾಂಧಿ ತಮ್ಮ ಪಕ್ಷಕ್ಕೆ ಖಡಾಖಂಡಿತವಾಗಿ ಹೇಳಿದ್ದರು.
ಲೋಕಸಭಾ ಚುನಾವಣೆಯ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ರಾಹುಲ್ ಗಾಂಧಿ ಸಲ್ಲಿಸಿರುವ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಮತ್ತೊಬ್ಬ ನಾಯಕ ಆಯ್ಕೆ ಆಗುವವರೆಗೂ ಪಕ್ಷದ ಹಿರಿಯ ನಾಯಕ ಮೋತಿಲಾಲ್ ವೊಹ್ರಾ ಅವರು ಹಂಗಾಮಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
