ಬೆಂಗಳೂರು :
ಇಂದು ರಾಯಚೂರಿನಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪಾಳ್ಗೊಳ್ಳಲಿದ್ದಾರೆ.
ರಾಯಚೂರು ಹಾಗೂ ಚಿಕ್ಕೋಡಿಯಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ರಾಹುಲ್ ಗಾಂಧಿ ಅವರು ಪ್ರಚಾರ ಮಾಡಲಿದ್ದು, ಮಧ್ಯಾಹ್ನ 3 ಗಂಟೆಗೆ ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿರುವ ರಾಹುಲ್ ಗಾಂಧಿ ರಾಯಚೂರಿನ ಅಭ್ಯರ್ಥಿ ಬಿ.ವಿ.ನಾಯಕ್ ಪರ ಪ್ರಚಾರ ನಡೆಸಲಿದ್ದಾರೆ.
ಬಳಿಕ ಸಂಜೆ 5.10 ಕ್ಕೆ ಹುಕ್ಕೇರಿಯಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಈ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.
ರಾಹುಲ್ ಆಗಮನ ಹಿನ್ನೆಲೆಯಲ್ಲಿ 3 ಎಸ್ಪಿ, 9 ಡಿವೈಎಸ್ಪಿ, 25 ಸಿಪಿಐ, 40 ಪಿಎಸ್ಐ, 1 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
ರಾಜ್ಯದ 14 ಲೋಕಸಭೆ ಕ್ಷೇತ್ರಗಳಿಗೆ ನಿನ್ನೆ ಮತದಾನ ಮುಕ್ತಾಯವಾಗಿದ್ದು, ಇನ್ನುಳಿದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಏಪ್ರಿಲ್ 23 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ರಾಯಚೂರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ