ರಾಯಚೂರು :
ಹಾಡುಹಗಲೇ ದುಷ್ಕರ್ಮಿಗಳ ತಂಡ ಸಿನಿಮೀಯ ರೀತಿಯಲ್ಲಿ ಪಿಸ್ತೂಲು ಹಾಗೂ ಮಾರಕಾಸ್ತ್ರಗಳಿಂದ ಬೆದರಿಸಿ ವ್ಯಕ್ತಿಯೊಬ್ಬನನ್ನು ಕಿಡ್ಯ್ನಾಪ್ ಮಾಡಿದ್ದಾರೆ.
ಮಧ್ಯಾಹ್ನ 12.30ರ ಸುಮಾರಿಗೆ ಲಿಂಗಸುಗೂರು ಕೇಂದ್ರ ಬಸ್ ನಿಲ್ದಾಣದ ಬಳಿ ಹಾಡುಹಗಲೇ ಒಬ್ಬ ವ್ಯಕ್ತಿಯನ್ನ ಸ್ನೇಹಿತರಂತೆ ಮಾತನಾಡಿಸಿ ಕಾರಿನಲ್ಲಿ ಬಲವಂತವಾಗಿ ಹತ್ತಿಸಲು ಯತ್ನಿಸಿದ್ದಾರೆ. ಯುವಕ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸ್ಥಳೀಯರು ನೆರವಿಗೆ ಧಾವಿಸಲು ಮುಂದಾಗುತ್ತಿದ್ದಂತೆ ಚಾಕು ಮತ್ತು ಪಿಸ್ತೂಲ್ ತೋರಿಸಿ ಹೆದರಿಸಿದ್ದಾರೆ. ಬಳಿಕ ಬಲವಂತವಾಗಿ ಯುವನಕನನ್ನು ಕಾರು ಹತ್ತಿಸಿ ಕರೆದೊಯ್ದಿದ್ದಾರೆ. ವ್ಯಕ್ತಿಯನ್ನ ಅಪಹರಿಸುತ್ತಿದ್ದ ವೇಳೆ ತಡೆಯಲು ಮುಂದಾದ ಕೆಲ ಸ್ಥಳೀಯರ ಪ್ರಯತ್ನ ವಿಫಲವಾಗಿದೆ.
ಯುವಕನನ್ನು ಕಿಡ್ನ್ಪಾಪ್ ಮಾಡಿದ ಕಾರು ಮಸ್ಕಿ ಮಾರ್ಗದಲ್ಲಿ ಸಾಗಿದ್ದು, ಯಾರಿಗೆ ಸೇರಿದ್ದೆಂದು ಗೊತ್ತಾಗಿಲ್ಲ. ಪೊಲೀಸರು ರಾಜ್ಯದ ಎಲ್ಲ ಚೆಕ್ ಪೋಸ್ಟ್ ಗಳಿಗೆ ಮಾಹಿತಿ ನೀಡಿದ್ದು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ