ರಾಯಚೂರು:
ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹಾಗೂ ಇಬ್ಬರು ಬಿಜೆಪಿ ಶಾಸಕರ ವಿರುದ್ಧ ತನಿಖೆ ಆರಂಭವಾಗಿದೆ.
ಕೇಸ್‍ನಲ್ಲಿ ಯಡಿಯೂರಪ್ಪ ಮೊದಲ ಆರೋಪಿಯಾಗಿದ್ದು, ಬಿಜೆಪಿ ಶಾಸಕರಾದ ಶಿವನಗೌಡನಾಯಕ್, ಪ್ರೀತಂಗೌಡ ನಾಯಕ್ 2 ಮತ್ತು 3ನೇ ಆರೋಪಿಯಾಗಿದ್ದಾರೆ. ಪ್ರಕರಣದ ತನಿಖೆಯನ್ನ ರಾಯಚೂರು ಡಿವೈಎಸ್ ಪಿ ಹರೀಶ್ ಗೆ ಒಪ್ಪಿಸಲಾಗಿದ್ದು, ಮಾಹಿತಿ ಕಲೆ ಹಾಕುತ್ತಿದ್ದಾರೆ.
ಜಿಲ್ಲೆಯ ದೇವದುರ್ಗ ಪ್ರವಾಸಿ ಮಂದಿರದಲ್ಲಿ ಮಹಜರ್ ಮಾಡಿರುವ ಪೊಲೀಸರು ಘಟನೆ ನಡೆದ ಕೋಣೆ, ಸ್ಥಳದ ಅಳತೆ ತೆಗೆದುಕೊಂಡಿದ್ದು, ದೂರುದಾರ ಶರಣಗೌಡ ಕಂದಕೂರನ್ನು ಕರೆಯಿಸಿ ಮಾಹಿತಿ ಕಲೆ ಹಾಕಿದ್ದು, ಹೇಳಿಕೆಗಳನ್ನು ವಿಡಿಯೋ ರೆಕಾರ್ಡ್ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಫೆ. 13 ರಂದು ಶರಣುಗೌಡ ಮೂಲಕ ಗುರುಮಿಟ್ಕಲ್ ಜೆಡಿಎಸ್ ಶಾಸಕ ನಾಗನಗೌಡಗೆ ಆಫರ್ ಕೊಟ್ಟಿದ್ದ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಭ್ರಷ್ಟಾಚಾರ ತಡೆಗಟ್ಟುವಿಕೆ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿತ್ತು. ಐಪಿಸಿ ಸೆಕ್ಷ 1860, ಯು/ಎಸ್-120ಬಿ, 504, 34 ಕಲಂ ಅಡಿ ಪ್ರಕರಣ ದಾಖಲಾಗಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ