ಮುಂದಿನ 3 ದಿನ ರಾಜ್ಯದಲ್ಲಿ ಭಾರಿ ಮಳೆ ; ರೆಡ್ ಅಲರ್ಟ್!!

ಬೆಂಗಳೂರು: 

      ಮುಂದಿನ 3 ದಿನ ವಾರ ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

     ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗಲಿದೆ.

      ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ 72 ಗಂಟೆ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಸೆಪ್ಟೆಂಬರ್ 21 ಹಾಗೂ 22 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.  ಈ ಅವಧಿಯಲ್ಲಿ 204.5 ಮಿಮೀ ಮಳೆಯಾಗುವ ಸಾಧ್ಯತೆ ಇದೆ. 

     ಈಗಾಗಲೇ ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ ಮತ್ತು ಬಳ್ಳಾರಿ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದ್ದಾನೆ. ಮಹಾ ಮಳೆಗೆ ಹಲವಾರು ರಸ್ತೆಗಳು ಕೊಚ್ಚಿ ಹೋಗಿವೆ. ಸೇತುವೆಗಳು ಮುಳುಗಡೆಯಾಗಿವೆ. ಅಪಾರ ಪ್ರಮಾಣದ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಇದರ ನಡುವೆ ಮತ್ತೆ ಮಹಾಮಳೆಯಾಗುವ ಸೂಚನೆಯನ್ನು ಇಲಾಖೆ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap