ಬೆಂಗಳೂರು :
ಪ್ರತಿ ವರ್ಷ ನವೆಂಬರ್ 1 ರಂದು ನೀಡಲಾಗುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿಯನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ರದ್ದುಪಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಜೊತೆಗೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಕಾರಣ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ರದ್ದುಪಡಿಸಿ ಮುಂದಿನ ವರ್ಷ ಎರಡು ವರ್ಷದ ಪ್ರಶಸ್ತಿಗಳನ್ನು ಏಕಕಾಲಕ್ಕೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.
ಈಗಾಗಲೇ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ