ಬೆಂಗಳೂರು :
ಜೆಡಿಎಸ್ ಪಕ್ಷ ಬಿಟ್ಟು ಕಾಂಗ್ರೆಸ್ ಸೇರ್ಪಡೆಗೊಂಡ ರಮೇಶ್ ಬಾಬುಗೆ ವಿಧಾನಪರಿಷತ್ ಚುನಾವಣೆಗೆ ಟಿಕೆಟ್ ನೀಡಲಾಗಿದೆ.
ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಟಿಕೆಟ್ ಘೋಷಣೆ ಮಾಡಿದ್ದು, ಆಗ್ನೇಯ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಮೇಶ್ ಬಾಬು ಸ್ಪರ್ಧಿಸಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ರಮೇಶ್ ಬಾಬು ಅವರು ಬಿ ಫಾರಂ ಪಡೆದುಕೊಂಡು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
