ಆಡಿಯೋ-ವಿಡಿಯೋಗಳ ಬಗ್ಗೆ ವೈಜ್ಞಾನಿಕ ತನಿಖೆ : ಬಸವರಾಜ ಬೊಮ್ಮಾಯಿ

ಬೆಂಗಳೂರು:

     ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಆಡಿಯೋ ಮತ್ತು ವಿಡಿಯೋ ಗಳು ಸರಣಿ ಧಾರಾವಾಹಿ ತರಹ ಬರುತ್ತಿವೆ. ಸಿಡಿ, ಆಡಿಯೋ ಮತ್ತು ವಿಡಿಯೋ ಬಗ್ಗೆ ವೈಜ್ಞಾನಿಕವಾಗಿ ತನಿಖೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, SIT ತನಿಖೆಯ ದಾರಿ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೇ ತನಿಖಾ ತಂಡ ಕೆಲಸ ಮಾಡಲಿದೆ. ಕಾನೂನು ಪ್ರಕಾರ ನಿಷ್ಠೂರವಾಗಿ ನಡೆಯುತ್ತಿರುವ ತನಿಖೆ, ಯಾರ ಪರವೂ ಇಲ್ಲ. ಯಾರ ವಿರೋಧವೂ ಇಲ್ಲ ಎಂದರು.

    ಈಗ ಬಿಡುಗಡೆ ಆಗಿರುವ ಆಡಿಯೋ ಮತ್ತು ವಿಡಿಯೋ ಗಳನ್ನು ವೈಜ್ಞಾನಿಕ ವಾಗಿ ಪರಿಶೀಲನೆ ನಡೆಸಲಾಗುವುದು. ಅದರಲ್ಲಿರುವ ಸತ್ಯಾಸತ್ಯತೆ ಅಂಶಗಳನ್ನು ಪರಿಶೀಲಿಸಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link