ಬೆಳಗಾವಿ:
ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುತ್ತಾರೆ. ಅವರ ಜತೆ ಇಂದು ಮಾತನಾಡುತ್ತೇನೆ. ಹೈಕಮಾಂಡ್ನಿಂದಲೂ ರಮೇಶ್ ಸಂಪರ್ಕಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ , ಆದರೆ ಅವರು ರಾಜೀನಾಮೆ ಕೊಡುವ ಪ್ರಶ್ನೆಯ ಇಲ್ಲ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ, ಅವರ ಬಳಿ ನಾನು ಮಾತನಾಡುತ್ತೇನೆ. ಪಕ್ಷದಲ್ಲೇ ರಮೇಶ್ ಮುಂದುವರೆಯುತ್ತಾರೆ ಎಂದರು.
ಎಲ್ಲದಕ್ಕೂ ಸಿದ್ದರಾಮಯ್ಯನವರೇ ಮಾಸ್ಟರ್ ಮೈಂಡ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಲ್ಲ ಹಾಗೇನೂ ಇಲ್ಲ. ಅವರು ನಮ್ಮ ಪಕ್ಷದ ಪರವಾಗಿ ಇದ್ದಾರೆ. ರಮೇಶ್ ರಾಜೀನಾಮೆ ಕೊಟ್ಟರೆ ಅದಕ್ಕೂ ನಮಗೂ ಸಂಬಂಧವಿಲ್ಲ. ನಾವು ಪಕ್ಷದಲ್ಲೇ ಮುಂದುವರಿಯುತ್ತೇವೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
