ಬೆಂಗಳೂರು:
ಇಂದು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಈ ನಡುವೆ ಕಬ್ಬು ಬೆಳೆಗಾರರ ವಿಚಾರ ಪ್ರಸ್ತಾಪ ಆಗುತ್ತಿದ್ದಂತೆ ಸಭೆಯಿಂದ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಎದ್ದು ಹೊರ ನಡೆದಿದ್ದಾರೆ ಎಂದು ತಿಳಿದು ಬಂದಿದೆ.
ಕಬ್ಬು ಬೆಳೆಗಾರರ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಒಳಗೊಂಡತೆ ಕಬ್ಬು ಕಾರ್ಖಾನೆಗಳನ್ನು ಹೊಂದಿರುವ ಶಾಸಕರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದೇ ವೇಳೆ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಯಾಕೆ ಕಬ್ಬು ಬೆಳೆಗಾರರ ಬಾಕಿ ಹಣವನ್ನು ಉಳಿಸಿಕೊಂಡಿದ್ದೀರಿ? ಆ ಭಾಗದ ಸಚಿವರಾಗಿ ನೀವು ಬಾಕಿ ಹಣ ಉಳಿಸಿಕೊಂಡಿದ್ದೀರ ಅಂತ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯೆ ನೀಡದೆ ರಮೇಶ್ ಜಾರಕಿಹೊಳಿ ಸಭೆಯಿಂದ ಎದ್ದು ಹೊರಹೋಗಿದ್ದಾರೆ ಎಂದು ವರದಿ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
