ಬೆಳಗಾವಿ:
ಕಾಂಗ್ರೆಸ್ ಪಕ್ಷಕ್ಕೆ ಕಂಟಕವಾಗಿರುವ ಶಾಸಕ ರಮೇಶ್ ಜಾರಕಿಹೊಳಿಯವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳುವುದಕ್ಕೆ ಮಂದಾಗಿದ್ದಾರೆ ಎನ್ನಲಾಗಿದೆ.
ಅವರು ಇಂದು ಗೋಕಾಕ್ ನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿ, ಶೀಘ್ರದಲ್ಲಿಯೇ ರಾಜೀನಾಮೆ ನೀಡುವುದರ ಬಗ್ಗೆ ದಿನಾಂಕ ತಿಳಿಸುತ್ತೇನೆ. ನಾನು ತಾಂತ್ರಿಕವಾಗಿ ಕಾಂಗ್ರೆಸ್ ಕಾಂಗ್ರೆಸ್ ಶಾಸಕರಾಗಿಯೇ ಮುಂದುವರೆಯಲಿದ್ದೇನೆ ಎಂದು ಹೇಳುವ ಮೂಲಕ ಸದ್ಯದಲ್ಲೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದನ್ನು ಖಚಿತಪಡಿಸಿದ್ದಾರೆ.
1999ರ ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಾರಿಕೆ ಹೆಚ್ಚಾಗಿದೆ. ಈಗ ಗುಂಪುಗಾರಿಕೆ ಮಿತಿಮೀರಿದೆ. ಕಾಂಗ್ರೆಸ್ ಪಕ್ಷದಿಂದ ನಮ್ಮನ್ನು ಯಾರೂ ತಮ್ಮನ್ನು ಸಂಪರ್ಕಿಸಿಲ್ಲ. ಚಿಕ್ಕೋಡಿಯಲ್ಲಿ ರಮೇಶ್ ಕತ್ತಿ ಟಿಕೆಟ್ ವಂಚಿತರಾದಾಗ ಯಡಿಯೂರಪ್ಪ ಅವರು ಬೆಳಗಾವಿಗೆ ಆಗಮಿಸಿ ಮಾತುಕತೆ ಮೂಲಕ ಬಿಕ್ಕಟ್ಟನ್ನು ಶಮನಗೊಳಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಇಂತಹ ಪರಿಸ್ಥಿತಿಯಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಬೇರೆ ಪಕ್ಷ ಸೇರ್ಪಡೆ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ