ಬೆಳಗಾವಿ:
ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಮತದಾನಕ್ಕೂ ಮುನ್ನವೇ ಪಕ್ಷದ ನಾಯಕರಿಗೆ ದೊಡ್ಡ ಶಾಕ್ ನೀಡಿದ್ದಾರೆ.
ಬೆಳಗಾವಿಯಲ್ಲಿರುವ ರಮೇಶ್ ಜಾರಕಿಹೊಳಿ ಯಾವುದೇ ಕಾಂಗ್ರೆಸ್ ಚಟುವಟಿಕೆ, ಪ್ರಚಾರ ಸಭೆಗಳಲ್ಲೂ ಕಾಣಿಸಿಕೊಂಡಿರಲಿಲ್ಲ. ಈಗ ಧಿಡೀರ್ ಕ್ಷೇತ್ರದಲ್ಲಿ ಆಪ್ತರು ಮತ್ತು ಕಾರ್ಯಕರ್ತರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸದಿರಲು ತೀರ್ಮಾನ ಕೈಗೊಂಡಿದ್ದಾರೆಂದು ಹೇಳಲಾಗಿದ್ದು, ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆನ್ನಲಾಗಿದೆ.
ಜಾರಕಿಹೊಳಿಯವರ ಈ ನಡೆಯಿಂದ ಕಾಂಗ್ರೆಸ್ ವಲಯದಲ್ಲಿ ನಡುಕ ಮೂಡಿಸಿದ್ದು, ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ಸೇರ್ಪಡೆಯಾಗಲಿದ್ದಾರಾ ಎಂಬ ಅನುಮಾನ ಮೂಡುವಂತೆ ಮಾಡಿದೆ.