ಮಂಗಳೂರು:
ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಮಾಡಿದ ತಂದೆಗೆ ಮಂಗಳೂರಿನ 2 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಹಾಗೂ ಪೊಕ್ಸೊ ಅಡಿ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೊಳಾಗಾದವರನ್ನು ಉತ್ತರ ಭಾರತ ಮೂಲದ ನಿವಾಸಿ, ಪ್ರಸ್ತುತ ನಗರ ನಿವಾಸಿ ಕಿಶೋರ್ ಭಯ್ಯಾ (36) ಎಂದು ಗುರುತಿಸಲಾಗಿದೆ.
ಈತ ತನ್ನ 13 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ. 2016ರಲ್ಲಿ ಕಿಶೋರ್ ಭಯ್ಯಾನ ಪತ್ನಿ ಹೆರಿಗೆಗೆಂದು ಆಸ್ಪತ್ರಗೆ ದಾಖಲಾಗಿದ್ದ ಸಂದರ್ಭದಲ್ಲಿ ಕಿಶೋರ್ ಭಯ್ಯಾ ತನ್ನ ಪುತ್ರಿಯನ್ನು ಅತ್ಯಚಾರ ಮಾಡಿದ್ದು ಕೊಲೆ ಬೆದರಿಕೆ ಹಾಕಿದ್ದ. ಇದರಿಂದ ಬೆದರಿದ ಬಾಲಕಿ ಈ ವಿಷಯವನ್ನು ಯಾರಲ್ಲೂ ಹೇಳಿರಲಿಲ್ಲ. ಆ ಬಳಿಕ ಆರೋಪಿ ತಂದೆ ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿದ್ದು ಆ ಪರಿಣಾಮವಾಗಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಬಾಲಕಿಯ ತಾಯಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಇನ್‌ಸ್ಪೆಕ್ಟರ್ ಕಲಾವತಿ ಅವರು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ 12 ಮಂದಿ ಸಾಕ್ಷಿದಾರರನ್ನು ಹಾಗೂ 24 ದಾಖಲೆಗಳನ್ನು ಪರಿಗಣಿಸ ಲಾಗಿದೆ. ಮಗುವಿನ ಡಿಎನ್‌ಎ ಪರೀಕ್ಷೆಯಲ್ಲೂ ಕಿಶೋರ್ ಭಯ್ನಾವು ಜೈವಿಕ ತಂದೆ ಎನ್ನುವುದು ಸಾಬೀತಾಗಿದೆ.
ಆರೋಪಿಯ ವಿರುದ್ಧ ಐಪಿಸಿ 376 (ಅತ್ಯಾಚಾರ), 506 (ಕೊಲೆ ಬೆದರಿಕೆ), ಪೋಕ್ಸೋ ಕಾಯ್ದೆ 5 ಮತ್ತು 6 ಕಲಂ (ಲೈಂಗಿಕ ದೌರ್ಜನ್ಯ)ರಡಿ ಪ್ರಕರಣ ಸಾಬೀತುಪಡಿಸಿ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ ವಿಶೇಷ ನ್ಯಾಯಾಲಯ ನ್ಯಾಯಾಧೀಶೆ ಬಿ.ಆರ್. ಪಲ್ಲವಿ ತೀರ್ಪು ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ