ಬೆಂಗಳೂರು:
ಸಿಲಿಕಾನ್ ಸಿಟಿಯ ಮಾಲಿನ್ಯಕ್ಕೆ ಹೆಸರುವಾಸಿ ಎನ್ನಲಾಗಿರುವ ಬೆಳ್ಳಂದೂರು ಕೆರೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಫೋಟೋಶೂಟ್ ಮಾಡಿಸಿದ್ದಾರೆ.
ಹೌದು, ಜಲ ಮಾಲಿನ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಫೋಟೋಶೂಟ್ ಮಾಡಿಸಿರುವ ಅವರು, ಅಂಡರ್ ವಾಟರ್ ಫೋಟೋಶೂಟ್ ಮಾಡಿಸುವ ಮೊದಲು ನನಗೆ ಬೆಳ್ಳಂದೂರು ಕೆರೆಯ ಪರಿಸ್ಥಿತಿ ತಿಳಿದಿರಲಿಲ್ಲ. ಈಗ ಬೆಳ್ಳಂದೂರು ಕೆರೆ ಇರುವ ಸ್ಥಿತಿಗೆ ಮುಂದೆ ಬೇರೆ ಕೆರೆಗಳು ಬರಬಹುದು ಎಂದು ತಮ್ಮ ಫೋಟೋ ಜೊತೆಗೆ ಟ್ವೀಟ್ ಮಾಡಿದ್ದಾರೆ.
Well wasn't aware of this till we had to actually go and shoot this in Bellandur lake..which like really broke my heart,and imagine few years down the line..it’s the same case everywhere else..? I’d rather not want to be in that space.. I just wanted to share ?
(2/2) pic.twitter.com/zshJLDwW6s— Rashmika Mandanna (@iamRashmika) December 13, 2018
ಈ ಪ್ರದೇಶದ ಹಲವು ಕಾರ್ಖಾನೆಗಳ ರಾಸಾಯನಿಕ ಕಲುಷಿತ ನೀರು ಹಾಗು ಇತರೇ ತ್ಯಾಜ್ಯಗಳು ಬೆಳ್ಳಂದೂರು ಕೆರೆಗೆ ಬಂದು ಸೇರುವುದರಿಂದ ಕೆರೆಯ ನೀರು ಹೆಚ್ಚು ಮಲಿನವಾಗಿದೆ. ಆದರಿಂದ ಜನರಲ್ಲಿ ಜಲ ಮಾಲಿನ್ಯದ ಕುರಿತು ಜಾಗೃತಿ ಮೂಡಿಸಲು ನಟಿ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಯಲ್ಲಿ ಅಂಡರ್‍ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ರಶ್ಮಿಕಾ ಅವರ ಫೋಟೋಶೂಟ್ ಅನ್ನು ಸನ್ಮತಿ ಡಿ. ಪ್ರಸಾದ್ ಅವರು ನಿರ್ದೇಶಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ