ಬೆಂಗಳೂರು :
ಸುಳ್ಳು ದಾಖಲೆಗಳನ್ನು ನೀಡಿ ರೇಷನ್ ಕಾರ್ಡ್ ಪಡೆದಿದ್ದ ಪಡಿತರ ಚೀಟಿ ಪಡೆದುಕೊಂಡಿದ್ದ 3,55,516 ಕುಟುಂಬಗಳನ್ನು ಅನರ್ಹಗೊಳಿಸಲಾಗಿದೆ.
ರಾಜ್ಯಾದ್ಯಂತ ಆರ್ಥಿಕವಾಗಿ ಸಬಲರಾದವರನ್ನು ಯೋಜನೆಯಿಂದ ಹೊರಗಿಡಲಾಗಿದ್ದು, ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು, ಮೂರು ಹೆಕ್ಟರ್ ಗಿಂತ ಹೆಚ್ಚು ಜಮೀನು ಹೊಂದಿರುವ ಕುಟುಂಬಗಳು 1.20 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವವರ 27,527 ಅಂತ್ಯೋದಯ, 3,28,178 ಬಿಪಿಎಲ್ ಕಾರ್ಡ್ ಗಳು ರದ್ದಾಗಿವೆ ಎಂದು ಆಹಾರ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.
ರದ್ದಾದ ಅನೇಕ ಅಂತ್ಯೋದಯ ಕಾರ್ಡ್ ದಾರರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ ಬದಲಾವಣೆ ಮಾಡಿಕೊಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ