ದಾವಣಗೆರೆ:
ಜನವರಿ 26ರ ನಂತರ ರೇಷನ್ ಕೂಡ ಮನೆ ಬಾಗಿಲಿಗೆ ಬರಲಿದೆ. ಇದಕ್ಕಾಗಿ ಯೋಜನೆ ರೂಪಿಸಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳು ವಿಧಾನಸೌಧದಲ್ಲಿ ಇರೋದಿಲ್ಲ. ಜನರ ಬಳಿಗೆ ಒಯ್ಯುವ ಕಾರ್ಯವನ್ನು ಮಾಡೋ ನಿಟ್ಟಿನಲ್ಲಿ ಜನವರಿ 26ರಿಂದ ಸರ್ಕಾರದ ಯೋಜನೆಗಳನ್ನು ಮನೆಯ ಬಾಗಿಲಿಗೆ ತಲುಪಿಸೋ ಕೆಲಸ ಮಾಡಲಿದ್ದೇವೆ. ಇದರ ಭಾಗವಾಗಿ ಪಡಿತರ ಧಾನ್ಯಗಳನ್ನು ಫಲಾನುಭವಿಗಳ ಮನೆ ಭಾಗಿಲಿಗೆ ತಲುಪಿಸೋ ಕೆಲಸ ಮಾಡಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ